ಕಡಬ ಪೇಟೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮ ಪಾಲಿಸದವರಿಗೆ ಲೋಕಾಯುಕ್ತ ಡಿವೈಎಸ್ಪಿ ಪಾಠ!

ಕಡಬ ಪೇಟೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮ ಪಾಲಿಸದವರಿಗೆ ಲೋಕಾಯುಕ್ತ ಡಿವೈಎಸ್ಪಿ ಪಾಠ!

Kadaba Times News
0

ಕಡಬ ಟೈಮ್ಸ್, ಪಟ್ಟಣ ಸುದ್ದಿ:ಸರ್ಕಾರಿ ಕಚೇರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು  ಪರಿಶೀಲಿಸಲು ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಕಡಬ ಪಟ್ಟಣಕ್ಕೆ ಭೇಟಿ ನೀಡಿದರು.

ತಾ.ಪಂ ಕಚೇರಿಗೆ ಭೇಟಿ ನೀಡಿದ ಬಳಿಕ   ಕಡಬದ ಪೇಟೆಯುದ್ದಕ್ಕೂ ಸ್ಥಳೀಯಾಡಳಿತದ ಅಧಿಕಾರಿಗಳ ಜೊತೆ ಅಂಗಡಿ ಹೋಟೆಲ್, ಬ್ಯಾಂಕ್ ಕಛೇರಿಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.ಅಲ್ಲದೆ ಹಲವರಿಗೆ  ಮುಂಜಾಗೃತಾ ಕ್ರಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದ್ದಾರೆ.

ಕೆಲವರು ಮಾಸ್ಕ್ ಧರಿಸದೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದಿರುವುದನ್ನು ಗಮನಿಸಿದ  ಡಿವೈಎಸ್ಪಿ ಯವರು ಕೋವಿಡ್-೧೯ ಪಾಠ ವಿವರಿಸಿದರು.  ಮಾಡಿದರು  ಅವರಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಲೋಕಾಯುಕ್ತ ಹೆಡ್ ಕಾನ್ಸ್ಟೆಬಲ್ ವೇಣುಗೋಪಾಲ್, ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಪಂಚಾಯತ್ ಸಿಬ್ಬಂದಿಗಳು ಜತೆಗಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top