ಕಡಬ ಟೈಮ್ಸ್ (KADABA TIMES):2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕಡಬ ತಾಲೂಕಿನಿಂದ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಆಯ್ಕೆ ಆಗಿದೆ.
ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ 195 ಅಂಕಗಳನ್ನು ಪಡೆದುಕೊಂಡು ಪ್ರಶಸ್ತಿಗೆ ಆಯ್ಕೆ ಆಗಿದೆ. ಪ್ರಶಸ್ತಿ ಜೊತೆಗೆ ಪುರಸ್ಕಾರ ಪಡೆಯುವ ಗ್ರಾಮ ಪಂಚಾಯಿತಿಗೆ ತಲಾ 5 ಲಕ್ಷ ರೂಪಾಯಿ ಬಹುಮಾನ ಇರುತ್ತದೆ. ಪ್ರಶಸ್ತಿ ಪ್ರಧಾನ ಸಮಾರಂಭ ಅಕ್ಟೋಬರ್ 2 ಗಾಂಧಿ ಜಯಂತಿಯಂದು ಬೆಂಗಳೂರು ವಿಧಾನ ಸೌಧ ಬ್ಲಾಂಕೆಟ್ ಹಾಲ್‌ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಿಂದ ಉಪ್ಪಿನಂಗಡಿ, ಕಡಬದಿಂದ ಕುಟ್ರುಪ್ಪಾಡಿ ಮಂಗಳೂರುನಿಂದ ಮುನ್ನೂರು, ಮೂಡಬಿದ್ರೆಯ ಬೆಳುವಾಯಿ, ಬಂಟ್ವಾಳದ ಕೊಳ್ನಾಡು, ಬೆಳ್ತಂಗಡಿಯ ಅಂಡಿಂಜೆ, ಸುಳ್ಯದ ಐರ್ವನಾಡು ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.
ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಪಂಚಾಯಿತಿಗಳ ಆಯ್ಕೆ ಕುರಿತು ಉಲ್ಲೇಖದ ಪತ್ರದಲ್ಲಿ ಸೂಚಿಸಿದಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ನೀಡಿದ ವರದಿಯಂತೆ, ಆಯುಕ್ತರು ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇವರ ಆದೇಶದಂತೆ ದ.ಕ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.


