14 ವರ್ಷದ ಬಾಲಕಿಯೊಂದಿಗೆ ಅಸಭ್ಯ ವರ್ತನೆ |ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

14 ವರ್ಷದ ಬಾಲಕಿಯೊಂದಿಗೆ ಅಸಭ್ಯ ವರ್ತನೆ |ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Kadaba Times News
0

ಕಡಬ ಟೈಮ್ಸ್ ,ವಿಟ್ಲ: ಕೊಳ್ನಾಡು ಗ್ರಾಮದ ಮನೆಯೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಒಬ್ಬಂಟಿಯಾಗಿದ್ದ ವೇಳೆ ಅಕ್ರಮವಾಗಿ ಮನೆಯೊಳಗೆ ಪ್ರವೇಶಿದ ವ್ಯಕ್ತಿಯೊರ್ವ ದೌರ್ಜನ್ಯವೆಸಗಲು ಯತ್ನಿಸಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳ್ನಾಡು ಗ್ರಾಮದ ಹಾರೀಸ್ (26 ವ.) ಪ್ರಕರಣದ ಆರೋಪಿ ಎಂದು ದೂರಿನಲ್ಲಿ ತಿಳಿಸಲಾಗಿದೆ. 14 ವರ್ಷ ಪ್ರಾಯದ ಬಾಲಕಿಯೊಬ್ಬಳೇ ಮನೆಯಲ್ಲಿದ್ದುದನ್ನು ಗಮನಿಸಿದ ಹಾರೀಸ್ ತೆಂಗಿನ ಎಣ್ಣೆ ಕೇಳುವ ನೆಪದಲ್ಲಿ ಮನೆಗೆ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡ ಆತ ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ. ಬಾಯಿಗೆ ಕೈಯಿಟ್ಟು ಬೊಬ್ಬೆ ಹಾಕದಂತೆ ಒತ್ತಡ ಹೇರಿದ್ದಾನೆ.

ಆತನಿಂದ ತಪ್ಪಿಸಿಕೊಂಡ ಬಾಲಕಿ ಕಿರುಚಿ ಮನೆಯಿಂದ ಹೊರಗೆ ಓಡುತ್ತಿರುವುದನ್ನು ಕಂಡ ನೆರೆ ಮನೆಯವರು ಬಾಲಕಿಯ ಮನೆಗೆ ಬಂದಾಗ ಆರೋಪಿ ಸ್ಥಳದಿಂದ ಪರಾರಿಯಾಗಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top