ಕಡಬದ ಸಮುದಾಯ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಮಾರಾಟ ಆರೋಪ

ಕಡಬದ ಸಮುದಾಯ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಮಾರಾಟ ಆರೋಪ

Kadaba Times News
0

ಕಡಬ ಟೈಮ್ಸ್, ಪಟ್ಟಣ ಸುದ್ದಿ: ಸಮುದಾಯ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯನ್ನು ನೂರು ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೇ.31 ರಂದು ಸುಳ್ಯ ಸುದ್ದಿ ಚಾನೆಲ್ ಏರ್ಪಡಿಸಿದ್ದ ಸಚಿವ ಎಸ್. ಅಂಗಾರ ಅವರ ಜತೆ ಫೋನ್ ಇನ್ ಕಾರ್ಯಕ್ರಮದಲ್ಲಿ ರಮೇಶ್ ರೈ ವಿಚಾರ ಪ್ರಸ್ತಾಪಿಸಿದ್ದು ಬಳಿಕ ಆಲಂಕಾರಿನ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಜನಾರ್ಧನ ಶೆಟ್ಟಿ ಅವರು ಈ ವಿಷಯ ಪ್ರಸ್ತಾಪಿಸಿ ಆರೋಪಿಸಿದ್ದಾರೆ.

ಇದಕ್ಕೆ ಪ್ರತ್ಯುತ್ತರವಾಗಿ ಮಾತನಾಡಿದ ಸಚಿವರು ಸಮರ್ಪಕ ಮಾಹಿತಿ ಪಡೆದು ಅಂತವರ ಮೇಲೆ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಸೌಲಭ್ಯ ವಂಚಿತ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top