ಕಡಬ ಟೈಮ್ಸ್, ಆಲಂಕಾರು: ಕಡಬ ತಾಲೂಕಿನ ಆಲಂಕಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಒಟ್ಟು 3 ಮಂದಿಯನ್ನು ಕೋವಿಡ್ ಬಲಿ ಪಡೆದುಕೊಂಡಿದೆ.
ಆಲಂಕಾರು ಕೋಡಿಲದ ದಿ.ಚೋಮರವರ ಪತ್ನಿ ಪೋಡಿ (64.ವ)ರವರು ಜೂ.1 ರಂದು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಪೋಡಿಯವರಿಗೆ ಕೆಮ್ಮು ಮತ್ತು ಜ್ವರ ಬಂದಿದ್ದು ಚಿಕಿತ್ಸೆಗಾಗಿ ಕೊಯಿಲ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಪುತ್ತೂರು ಸರಕಾರಿ ಅಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಅಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


