Big Update:ಪುತ್ತೂರಿನಲ್ಲಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ:ಮೂವರು ಪೊಲೀಸ್ ವಶಕ್ಕೆ

Big Update:ಪುತ್ತೂರಿನಲ್ಲಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ:ಮೂವರು ಪೊಲೀಸ್ ವಶಕ್ಕೆ

Kadaba Times News
0
ಕಡಬ ಟೈಮ್ಸ್:  ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಕೊಂಡಿರುವ ಬಗ್ಗೆ  ಮಾಹಿತಿ ಲಭ್ಯವಾಗಿದೆ.


ಪುತ್ತೂರು ಕೋರ್ಟ್ ರಸ್ತೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿರುವ ಬ್ಲಾಕ್ ಡೈಮಂಡ್ ಫ್ಯಾನ್ಸಿ ಅಂಗಡಿಗೆ ಆ.23ರ ನಸುಕಿನ ಜಾವ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬರು ಬಂದು ಅಂಗಡಿಯ ರೋಲಿಂಗ್ ಶೆಟರ್‌ಗೆ ತೈಲ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಈ ಘಟನೆ ಅಂಗಡಿಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಂಜೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top