ಪೆರಿಯಶಾಂತಿ:ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

ಪೆರಿಯಶಾಂತಿ:ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

Kadaba Times News
0

 ನೆಲ್ಯಾಡಿ:  ದಕ್ಷಿಣ ಕನ್ನಡ ಸಂಸದ  ಕ್ಯಾ. ಬ್ರಿಜೇಶ್ ಚೌಟರವರು ಸೆ.17 ರಂದು ಉದನೆ ಬಳಿಯ ರೆಖ್ಯಾಕ್ಕೆ  ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.


ಎಂಜಿರದ  ಹೋಟೆಲ್ ಸಮೀಪ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.  ನಂತರ ಸಂಸದರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ಸರ್ವಿಸ್ ರಸ್ತೆಯ ಕಾಮಗಾರಿಯ ಪರಿಶೀಲನೆಯನ್ನು ನಡೆಸಿದರು.



ತ್ತೀಚಿನ ಮಳೆಗೆ ಭೂ ಕುಸಿತಕ್ಕೆ ಒಳಗಾದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಹಾನಿಯಾದ ದೇವಸ್ಥಾನ ಪರಿಶೀಲನೆ ನಡೆಸಿ, ಅನುದಾನವನ್ನು ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು.


ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ ಬಜರಂಗದಳ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಬೇಬಿ ಕಿರಣ್, ಬಿಜೆಪಿ ಗ್ರಾಮ ಸಮಿತಿ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top