High court order : ಸಿ.ಟಿ.ರವಿಗೆ ಬಿಗ್‌ ರಿಲೀಫ್‌ : ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ

High court order : ಸಿ.ಟಿ.ರವಿಗೆ ಬಿಗ್‌ ರಿಲೀಫ್‌ : ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ

Kadaba Times News
0

 


ಕಡಬ ಟೈಮ್, ಬೆಂಗಳೂರು:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್​ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದರೆ ಇತ್ತ ಹೈಕೋರ್ಟ್​ ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. 


ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಟಿ ರವಿ ವಿರುದ್ಧ ಎಫ್​ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ.


ಪೊಲೀಸರು ಸಿ.ಟಿ.ರವಿ ಅವರನ್ನು ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ಕರೆ ತರುತ್ತಿದ್ದಾರೆ.ಇನ್ನೊಂದೆಡೆ, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿ.ಟಿ.ರವಿ ಅವರ ಪರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಾಳೆಗೆ(ಶನಿವಾರ) ಮುಂದೂಡಲಾಗಿತ್ತು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top