ಆಲಂಕಾರಿನ ಮನೆಯೊಂದರಿಂದ ಹಗಲು ಹೊತ್ತಲ್ಲೇ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ

ಆಲಂಕಾರಿನ ಮನೆಯೊಂದರಿಂದ ಹಗಲು ಹೊತ್ತಲ್ಲೇ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ

Kadaba Times News
0

 

ಕಳ್ಳತನ ನಡೆದಿರುವ ಮನೆಯಲ್ಲಿ ಪೊಲೀಸರಿಂದ ಪರಿಶೀಲನೆ(KADABA TIMES)

ಕಡಬ ಟೈಮ್ ,ಆಲಂಕಾರು:ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಲ್ಲೇ  ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ  ಆಲಂಕಾರು ಗ್ರಾಮದ ಕಲ್ಲೇರಿ ಎಂಬಲ್ಲಿ ಡಿ.18ರಂದು ನಡೆದಿದೆ.


ಆಲಂಕಾರು-ಶರವೂರು ರಸ್ತೆ ಬದಿಯ ಕಲ್ಲೇರಿ ಎಂಬಲ್ಲಿರುವ ಪಿಡಬ್ಲ್ಯುಡಿ ಗುತ್ತಿಗೆದಾರ ಸುಧಾಕರ ಪೂಜಾರಿಯವರ ಮನೆಯಲ್ಲಿ ಕಳ್ಳತನ ನಡೆದಿದೆ.  


ಕುಂತೂರಿನಲ್ಲಿದ್ದ ಕೃಷಿ ಜಾಗಕ್ಕೆ ಸುಧಾಕರ ಪೂಜಾರಿ ಅವರು ಬೆಳಿಗ್ಗೆ ಅಲ್ಲಿಗೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದು ಅವರ ಪತ್ನಿ ಸೌಮ್ಯ ಅವರು ಮಧ್ಯಾಹ್ನ 11.30 ವೇಳೆಗೆ ಮನೆಗೆ ಬಾಗಿಲು ಹಾಕಿ ಮನೆ ಪಕ್ಕದಲ್ಲೇ ಇರುವ ತೋಟಕ್ಕೆ ಹೋಗಿದ್ದರು. ಅವರು ಮಧ್ಯಾಹ್ನ 1.30 ಸುಮಾರಿಗೆ ಮನೆಗೆ ಬಂದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.


ಹಂಚಿನ ಮನೆಯ ಹಿಂಬದಿ ಬಾಗಿಲಿಗೆ ಕಾಲಿನಿಂದ ಒದ್ದು ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಬೆಡ್ರೋಮ್ ಕಪಾಟಿನಲ್ಲಿದ್ದ ಕರಿಮಣಿ ಸರ, ಮಕ್ಕಳ  ಚಿನ್ನದ ಉಂಗುರ, ಬೆಳ್ಳಿಯ ಕಾಲು ಚೈನ್, ಸೊಂಟದ ಚೈನ್ ಕಳವು ಗೈದಿದ್ದಾರೆ. ಅಲ್ಲದೇ ಕಪಾಟಿನಲ್ಲಿದ್ದ ರೋಲ್ಡ್ ಗೋಲ್ಡ್ ಸಹ ಕದ್ದೊಯ್ದಿದ್ದಾರೆ.  ಒಟ್ಟು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ವರದಿಯಾಗಿದೆ.  ಕಳ್ಳ ಮನೆಯ ಹಿಂಬದಿ ಬಾಗಿಲಿಗೆ ಕಾಲಿನಿಂದ ಒದ್ದಿದ್ದು ಕಾಲಿನ ಶೂ ಅಚ್ಚು ಬಾಗಿಲಿನಲ್ಲಿ ಕಾಣಿಸಿಕೊಂಡಿದೆ.


ಶ್ವಾನದಳ/ಬೆರಳಚ್ಚು ತಜ್ಞರ ಆಗಮನ: ಘಟನಾ ಸ್ಥಳಕ್ಕೆ ಕಡಬ ಎಸ್..ಗಳಾದ ಅಭಿನಂದನ್ ಎಂ.ಎಸ್., ಅಕ್ಷಯ್ ಢವಗಿ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಂಜೆ ವೇಳೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನ ಹೆದ್ದಾರಿ ಬದಿಯಲ್ಲಿ ಕಾರೊಂದು ನಿಂತಿರವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top