ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: A6 ಆರೋಪಿ ದೆಹಲಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: A6 ಆರೋಪಿ ದೆಹಲಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

Kadaba Times News
0

 


ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು


ಕಡಬ ಟೈಮ್ಸ್ ,ಮಂಗಳೂರು:  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ  ಎನ್.ಐ.ಎ ತಂಡ ಬಂಧಿಸಿದೆ.ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ ಎನ್ನಲಾಗಿದ್ದು  ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಆತನ ಮನೆಗೆ ದಾಳಿ ಮಾಡಿದ್ದರು.


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್​​​ಐಎ ಅಧಿಕಾರಿಗಳು ದಾಳಿ ಮಾಡಿದ್ದರು


ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದೂ ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು.  ಎನ್ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top