ಉಪ್ಪಿನಂಗಡಿ: ಅರ್ಧ ಕಂಬಳಿ ಹೊದ್ದು ಮಲಗಿದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಕೊ*ಲೆ ಶಂಕೆ

ಉಪ್ಪಿನಂಗಡಿ: ಅರ್ಧ ಕಂಬಳಿ ಹೊದ್ದು ಮಲಗಿದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಕೊ*ಲೆ ಶಂಕೆ

Kadaba Times News
0

 

ಉಪ್ಪಿನಂಗಡಿಯ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ(KADABA TIMES)

ಉಪ್ಪಿನಂಗಡಿ: ಇಲ್ಲಿನ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯೊಬ್ಬರ ಶವ ಅರ್ಧ ಕಂಬಳಿ ಹೊದ್ದು ಮಲಗಿದ  ರೀತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.


ಸುಮಾರು 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಇದಾಗಿದ್ದು, ವ್ಯಕ್ತಿಯ ತಲೆಗೆ ಕಲ್ಲು ಅಥವಾ ಇನ್ಯಾವುದೋ ಆಯುಧದಿಂದ ಹೊಡೆದು ಕೊಲೆ ನಡೆಸಿದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅರ್ಧ ಕಂಬಳಿ ಹೊದಿಸಿ ಮಲಗಿದ ರೀತಿಯಲ್ಲಿ ಮೃತದೇಹ ಕಂಡುಬಂದಿದ್ದು, ಮೃತದೇಹದ ಸ್ವಲ್ಪ ದೂರದಲ್ಲಿ ಸಿಮ್ ತೆಗೆದ ಮೊಬೈಲ್ ಒಂದು ಪತ್ತೆಯಾಗಿದೆ.


ಬಸ್ ನಿಲ್ದಾಣ ಬಳಿಯಿರುವ ನಿರ್ಮಾಣ ಹಂತದ ಕಟ್ಟಡವು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಗೆ ಸೇರಿದ್ದು, ಗ್ರಂಥಾಲಯ ನಿರ್ಮಾಣಕ್ಕಾಗಿ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಮಳೆ ಇದ್ದ ಕಾರಣ ಸೋಮವಾರ, ಮಂಗಳವಾರ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಇಂದು ಕೆಲಸಗಾರರು ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.


ಮೃತ ವ್ಯಕ್ತಿಯು ಅಸ್ಸಾಂ ಮೂಲದ ದೀಪಕ್ ಎನ್ನಲಾಗಿದೆ. ಈತ ಇಲ್ಲಿನ ಬಾರ್ & ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಕಳೆದ ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಾನೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top