ಸುಳ್ಯದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ ಸಮರ: ಅಷ್ಟಕ್ಕೂ ಅಲ್ಲಿ ನಡೆದದ್ದೇನು?

ಸುಳ್ಯದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ ಸಮರ: ಅಷ್ಟಕ್ಕೂ ಅಲ್ಲಿ ನಡೆದದ್ದೇನು?

Kadaba Times News
0

ಒಟ್ಟು ಸೇರಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು 


ಕಡಬ ಟೈಮ್ಸ್, ಸುಳ್ಯ:    ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ  ಸೋಮಶೇಖರ ಕೊಯಿಂಗಾಜೆ ನೇತೃತ್ವದ ಸಹಕಾರಿಗಳ ಅಭಿವೃದ್ಧಿ ರಂಗವು 9 ಸ್ಥಾನಗಳನ್ನು ಪಡೆದು ಗೆಲುವು ಸಾಧಿಸಿದೆ.


ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವ ವೇಳೆ ಕಾಂಗ್ರೆಸ್ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವುದಾಗಿ ತಿಳಿದು ಬಂದಿದೆ.

 

 ವಿಜಯೋತ್ಸವದಲ್ಲಿ ಸೋಮಶೇಖರ ಕೊಯಿಂಗಾಜೆ ಅವರುಮಾತನಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ತನ್ನನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎಂದು ಹೇಳಿದಾಗ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತ ಧನಪಾಲ್ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಈ ಸಮಯದಲ್ಲಿ  ಧನಪಾಲ್‌  ಮತ್ತು  ಸೋಮಶೇಖರ ಕೊಯಿಂಗಾಜೆಯವರ ಮಧ್ಯೆ ಮಾತಿನ ಚಕಮಕಿ ಆರಂಭಗೊಂಡು ಅನಂತರ ಸ್ಥಳದಲ್ಲಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ  ವಾಕ್ ಸಮರ ಆರಂಭವಾಗಿತ್ತು  . ವೇಳೆ ಸ್ಥಳದಲ್ಲಿದ್ದ ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿ ವಿಕೋಪ ಕ್ಕೆ ತಿರುಗದಂತೆ ನೋಡಿಕೊಂಡರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top