ಆಲಂಕಾರು: ಆತೂರಿನಲ್ಲಿ ಮರ ವಾಲುತ್ತಿದ್ದಂತೆ ಓಡಿ ಹೋಗಿ ಜೀವ ಉಳಿಸಿಕೊಂಡ ಯುವಕರು

ಆಲಂಕಾರು: ಆತೂರಿನಲ್ಲಿ ಮರ ವಾಲುತ್ತಿದ್ದಂತೆ ಓಡಿ ಹೋಗಿ ಜೀವ ಉಳಿಸಿಕೊಂಡ ಯುವಕರು

Kadaba Times News
0

 ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರವೊಂದು ಬುಡಸಮೇತ ಉರುಳಿಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ


ಕಡಬ ಟೈಮ್ಸ್ (KADABA TIMES) ಆಲಂಕಾರು: ಇಲ್ಲಿನ  ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರವೊಂದು ಬುಡಸಮೇತ ಉರುಳಿಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.



ಸ್ಥಳೀಯ ನಿವಾಸಿ ಅಬ್ದುಲ್ ಸಲಿನಿ ಅವರು ತಮ್ಮ ಮಾರುತಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಸಮೀಪದ ಅಂಗಡಿಯೊಂದಕ್ಕೆ ಹೋಗಿದ್ದರು.  ಆ ಸಮಯದಲ್ಲಿ ಅವರ ಸ್ನೇಹಿತರಾದ ಅಬ್ದುಲ್ ರಹಿಮಾನ್, ರಮ್ಹಾನ್ ಹಾಗೂ ಅಬ್ಬಾಸ್ ಅವರು ಕಾರಿನಲ್ಲೇ ಕುಳಿತಿದ್ದರು. ಇದ್ದಕ್ಕಿದ್ದಂತೆ, ರಸ್ತೆ ಬದಿಯಲ್ಲಿದ್ದ ಹಳೆಯ ಮಾವಿನ ಮರವು ವಾಲುತ್ತಿರುವುದನ್ನು ಅವರು ಗಮನಿಸಿದ್ದಾರೆ. ತಕ್ಷಣವೇ ಸಮಯಪ್ರಜ್ಞೆ ಮೆರೆದ ಅವರು ಕಾರಿನಿಂದ ಇಳಿದು ದೂರ ಓಡಿ ತಮ್ಮನ್ನು ರಕ್ಷಿಸಿಕೊಂಡಿದ್ದಾರೆ. ಅವರು ಇಳಿದ ಕೆಲವೇ ಕ್ಷಣಗಳಲ್ಲಿ ಮರವು ಕಾರಿನ ಮೇಲೆ ಬಿದ್ದಿದೆ.


ಈ ಘಟನೆಯಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಕಡಬ-ಉಪ್ಪಿನಂಗಡಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಯುವಕರು ಮರವನ್ನು ತುಂಡರಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ, ಕಾರಿನ ಮೇಲೆ ಬಿದ್ದಿದ್ದ ಮರದ ಭಾಗವನ್ನು ಜೆಸಿಬಿ ಯಂತ್ರದ ಸಹಾಯದಿಂದ ತೆರವುಗೊಳಿಸಲಾಯಿತು. 


ಈ ದುರ್ಘಟನೆಯಿಂದಾಗಿ ಸಮೀಪದಲ್ಲಿದ್ದ ವಿದ್ಯುತ್ ತಂತಿಗಳಿಗೂ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top