ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ನೂತನ ಪ್ರಾಂಶುಪಾಲರ ನೇಮಕ: ಇಬ್ಬರಿಗೆ ಭಾವಪೂರ್ಣ ಬೀಳ್ಕೊಡುಗೆ

ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ನೂತನ ಪ್ರಾಂಶುಪಾಲರ ನೇಮಕ: ಇಬ್ಬರಿಗೆ ಭಾವಪೂರ್ಣ ಬೀಳ್ಕೊಡುಗೆ

Kadaba Times News
0



ಕಡಬ ಟೈಮ್ಸ್ (KADABA TIMES) : ಕಡಬ:  ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಂಶುಪಾಲ ವಂದನೀಯ ಅಮಿತ್ ಪ್ರಕಾಶ್ ರೊಡ್ರಿಗಸ್ ಹಾಗೂ ಸೈಂಟ್ ಜೋಕಿಮ್ಸ್ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ಸಿ. ಗ್ರೇಟಾ ಮಸ್ಕರೇನಸ್ ಅವರ ಬೀಳ್ಕೊಡುಗೆ ಸಮಾರಂಭ ಶನಿವಾರ ಜರಗಿತು.



ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಿಸ್ಟರ್ ಗ್ರೇಟಾ ಅವರು  ಅಧ್ಯಾಪಕರಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಹಾದಿಗೆ ಶುಭಾಶಯ ಕೋರಿದರು.

 

ಸಂದರ್ಭದಲ್ಲಿ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.  

 

ಕಾರ್ಯಕ್ರಮದಲ್ಲಿ  2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಾಧಕರಿಗೆ ಅಭಿನಂದನೆ ಸಲ್ಲಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

 


ಸಮಾರಂಭದಲ್ಲಿ ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೆಸಿಂತ್ ವೇಗಸ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರು ಬಾಲಕೃಷ್ಣ ಬಿ., ವಾಚಣ್ಣ ಕೆರೆಮೂಲೆ, ಗಿರಿಧರ್ ರೈ, ಈಶ್ವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸೈಂಟ್ ಜೋಕಿಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕಿರಣ್ ಕುಮಾರ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಲತಾ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಆನ್ಸ್ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ದಕ್ಷಾ ಕೂಡ ಸಮಾರಂಭಕ್ಕೆ ಹಾಜರಿದ್ದರು.

 

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಲೋಲಾಕ್ಷಿ ಹಾಗೂ ಶಿಕ್ಷಕಿ ಶ್ರೀಲತಾ ಸಂಯೋಜಿಸಿದರು

Tags

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top