ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌: 2 ದಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌: 2 ದಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

Kadaba Times News
0

 ಕಡಬ ಟೈಮ್,(KADABA TIMES):ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ಅಲರ್ಟ್ಘೋಷಣೆ ಮಾಡಿದ ಬೆನ್ನಲ್ಲೇ ಮೇ 27 ಹಾಗೂ 28 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ (ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ) ಆದೇಶ ಹೊರಡಿಸಿದ್ದಾರೆ.



ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಮೇ 28 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.


ರಜೆ ಘೋಷಣೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸಿಬಿಎಸ್‌ಸಿ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ 27 ಹಾಗೂ 28 ರಂದು ರಜೆಯನ್ನು ಘೋಷಿಸಲಾಗಿದೆ.


ಮುನ್ನೆಚ್ಚರಿಕೆ ಕ್ರಮಗಳೇನು?: ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸಲು ತಿಳಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.n ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರ ತೀರಕ್ಕೆ, ಚಾರಣಕ್ಕೆ ತೆರಳಬಾರದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ದೂರವಾಣಿಯನ್ನು ಸಂಪರ್ಕಿಸಬೇಕು.ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ – 1077, 0824 2442590

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top