ಸುಳ್ಯ ಶಾಸಕಿಯ ಸೂಚನೆ ಬಳಿಕ ಎಚ್ಚೆತ್ತ ಗುತ್ತಿಗೆದಾರ: ಕಡಬ-ಪಂಜ ಮುಖ್ಯ ರಸ್ತೆಯ ಗುಂಡಿಗಳಿಗೆ ಜಲ್ಲಿ ಭಾಗ್ಯ!

ಸುಳ್ಯ ಶಾಸಕಿಯ ಸೂಚನೆ ಬಳಿಕ ಎಚ್ಚೆತ್ತ ಗುತ್ತಿಗೆದಾರ: ಕಡಬ-ಪಂಜ ಮುಖ್ಯ ರಸ್ತೆಯ ಗುಂಡಿಗಳಿಗೆ ಜಲ್ಲಿ ಭಾಗ್ಯ!

Kadaba Times News
0

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಸಂಪೂರ್ಣ ನಾದುರಸ್ತಿ ಸ್ಥಿತಿಯಲ್ಲಿರುವ ಕಡಬ-ಪಂಜ ಮುಖ್ಯ ರಸ್ತೆಯ ಪರಿಸ್ಥಿತಿ ಮಳೆ ಸುರಿದ ಬಳಿಕ ಇನ್ನಷ್ಟು ಹದಗೆಟ್ಟಿದೆ.ಕೆಸರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು  ಸಂಚಾರ ಮಾಡುತ್ತಿದ್ದು  ದುಸ್ತರವೆನಿಸಿದೆ.


ರಸ್ತೆಯನ್ನು ಅಭಿವೃದ್ಧಿಗೊಳಿಸಲು ಗುದ್ದಲಿ ಪೂಜೆ ನೆರವೇರಿಸಿ ತಿಂಗಳು ಒಂದು ಕಳೆದರೂ ಗುತ್ತಿಗೆದಾರ ಮಾತ್ರ ಇನ್ನೂ ಕಾಮಗಾರಿ ಆರಂಭಿಸದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಇಲ್ಲಿನ ಜನರು  ಗುತ್ತಿಗೆದಾರರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದಾರೆ. ತ್ವರಿತವಾಗಿ ಕೆಲಸ ನಿರ್ವಹಿಸುವ ಗುತ್ತಿಗೆದಾರರನ್ನು ನೇಮಿಸುವಂತೆ ಆಗ್ರಹ ಕೇಳಿ ಬಂದಿದೆ.  ಈ ನಡುವೆ  ಸದ್ಯ ಗುರುವಾರ(ಮೇ.22) ಮಳೆಯ ನಡುವೆಯೂ  ಗುಂಡಿಗಳಿಗೆ ಜಲ್ಲಿ ಭಾಗ್ಯ ಒದಗಿದೆ.



ವಾಹನದಲ್ಲಿ PWD ಬೋರ್ಡ್!:  ಗುರುವಾರದಂದು ಈ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಕಾರ್ಮಿಕರು ಗುಂಡಿಗಳಿಗೆ ಜಲ್ಲಿ ಸುರಿದು ಸಮತಟ್ಟು ಮಾಡುತ್ತಿದ್ದರು. ಈ ವೇಳೆ ಪಿಕಪ್ ವಾಹನದಲ್ಲಿ ಕೆಂಪು ಬಣ್ಣದಲ್ಲಿ  PWD ಎಂದು ಬೋರ್ಡ್ ಅಳವಡಿಸಲಾಗಿತ್ತು. ಈ ವಿಚಾರವನ್ನು ಲೋಕೋಪಯೋಗಿ ಇಲಾಖೆಯ ಗಮನಕ್ಕೆ ತಂದಾಗ ನಮ್ಮ ಇಲಾಖೆಯಿಂದ ಕಾರ್ಯ ನಿರ್ವಹಿಸುತ್ತಿಲ್ಲ, ಅದು ಗುತ್ತಿಗೆದಾರರ ವಾಹನ ಆಗಿರಬಹುದು ಎಂದಿದ್ದಾರೆ.  ಈ ರೀತಿ ಬೋರ್ಡು  ಹಾಕುವುದು ಸರಿಯಲ್ಲ ಎಂದು ಮಾಹಿತಿ ನೀಡಿದ್ದಾರೆ. 


ಇತ್ತೀಚೆಗೆ ಕಡಬಕ್ಕೆ ಆಗಮಿಸಿದ್ದ ಸುಳ್ಯ ಕ್ಷೇತ್ರದ  ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಭೇಟಿ ಮಾಡಿದ  ಆಟೋ ಚಾಲಕ ಮಾಲಕ ಸಂಘದ ಪ್ರತಿನಿಧಿಗಳು ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳದಿರುವ ಬಗ್ಗೆ ಪ್ರಶ್ನಿಸಿದಾಗ ರಸ್ತೆ ಅಭಿವೃದ್ಧಿಗೆ ಟೆಂಡರ್ ಪಡೆದಿರುವ ಗುತ್ತಿಗೆದಾರರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದರು.

 

ಲೋಕೋಪಯೋಗಿ ಇಲಾಖೆಯಿಂದ ಮಂಜೂರುಗೊಂಡಿರುವ 1 ಕೋಟಿ ರೂ. ಅನುದಾನದಲ್ಲಿ ಕಡಬ-ಪಂಜ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಸಲುವಾಗಿ ಶಾಸಕಿ ಭಾಗೀರಥಿ ಮುರುಳ್ಳ ಅವರು ಕಳೆದ ತಿಂಗಳು (. 6) ಗುದ್ದಲಿಪೂಜೆ ನೆರವೇರಿಸಿದ್ದರುಕಡಬದಿಂದ ಪಂಜವನ್ನು ಸಂಪರ್ಕಿಸುವ ಸುಮಾರು 10 ಕಿ.ಮೀ. ಉದ್ದದ ರಸ್ತೆಯಲ್ಲಿ ಕಡಬದಿಂದ ಕೋಡಿಂಬಾಳದ ತನಕ ಡಾಮರು ಕಿತ್ತುಹೋಗಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಹರಸಾಹಸಪಡುವಂತಾಗಿದೆ.  ಕೆಲವು ತಿಂಗಳ ಹಿಂದೆ ರಸ್ತೆಗೆ ತೇಪೆ ಹಾಕುವ ಕಾಮಗಾರಿಗೆ ಮುಂದಾದಾಗ ರಸ್ತೆಯನ್ನು ಪೂರ್ತಿಯಾಗಿ ಅಭಿವೃದ್ಧಿಪಡಿಸುವಂತೆ ಸ್ಥಳೀಯ ವಾಹನ ಚಾಲಕರು ಹಾಗೂ ಸಾರ್ವಜನಿಕರು ಆಗ್ರಹಿಸಿ ತೇಪೆ ಕಾರ್ಯಕ್ಕೆ ವಿರೋಧವ್ಯಕ್ತಪಡಿಸಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top