Road accident-ಕಡಬದ ಹಳೇಸ್ಟೇಷನ್ ಬಳಿ ಕೆಎಸ್ಸಾರ್ಟಿಸಿ ಬಸ್ – ಬೈಕ್‌ ನಡುವೆ ಅಪಘಾತ :ಬೈಕ್ ಸವಾರ ಮೃತ್ಯು

Road accident-ಕಡಬದ ಹಳೇಸ್ಟೇಷನ್ ಬಳಿ ಕೆಎಸ್ಸಾರ್ಟಿಸಿ ಬಸ್ – ಬೈಕ್‌ ನಡುವೆ ಅಪಘಾತ :ಬೈಕ್ ಸವಾರ ಮೃತ್ಯು

Kadaba Times News
0

 ಕಡಬ ಟೈಮ್, (KADABA TIMES):ಸರ್ಕಾರಿ ಬಸ್ ಮತ್ತು  ಬೈಕ್  ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ  (ಮೇ26 ) ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ  ಹಳೇಸ್ಟೇಷನ್ ಎಂಬಲ್ಲಿ ನಡೆದಿದೆ.



ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ವಿಶ್ವಜಿತ್(23) ಮೃತ ಯುವಕ.


ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ನಡುವೆ ಹಳೇಸ್ಟೇಷನ್ ಸಮೀಪದ ಕೃಷ್ಣನಗರ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.


ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಕಡಬ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.  ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top