ಕಡಬ: ರೈಲ್ವೇ ಟ್ರಾಕ್ ನಲ್ಲಿ ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ

ಕಡಬ: ರೈಲ್ವೇ ಟ್ರಾಕ್ ನಲ್ಲಿ ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ

Kadaba Times News
0

ಕಡಬ ಟೈಮ್ಸ್ ( KADABA TIME ): ರೈಲ್ವೇ ಟ್ರಾಕ್ ನಲ್ಲಿ  ಅಣ್ಣನನ್ನು ತಮ್ಮನೇ  ಬೆನ್ನಟ್ಟಿ  ಮೈಮೇಲೆ  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜೂ.8 ರ ಸಂಜೆ ನಡೆದಿದೆ.



ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ  (45 ವ ) ಎಂದು ಗುರುತಿಸಲಾಗಿದೆ.

ಗದಗ ಮೂಲದ ಅಣ್ಣ ತಮ್ಮಂದಿರು  ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಜೂ.8 ರ ಮದ್ಯಾಹ್ನದ    ಮಂಗಳೂರು- ಬೆಂಗಳೂರು ರೈಲು ಮಾರ್ಗ ದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಪುತ್ತೂರಿನಲ್ಲಿ ಹತ್ತಿದ್ದರು .ಬಳಿಕ ಜೊತೆಯಾಗಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು.


ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು  ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ  ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ.


ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು  ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ ಎನ್ನಲಾಗಿದೆ.ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಬೆಂಕಿ ಹಚ್ಚಿದಾತ ಪರಾರಿಯಾಗಲು ಯತ್ನಿಸಿದ್ದು ಸೇರಿದ್ದ ಜನರು ಆತನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.


ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ

 

ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು  ಬೆಂಕಿ ಹಚ್ಚಿರುವ  ನಿಂಗಪ್ಪ  ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ. ಈ ಘಟನೆಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top