ಕಡಬ:ಕೋಡಿಂಬಾಳ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ : ಆರೋಪಿಯನ್ನು ಬಂಧಿಸಿದ ರೈಲ್ವೇ ಪೊಲೀಸರು

ಕಡಬ:ಕೋಡಿಂಬಾಳ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ : ಆರೋಪಿಯನ್ನು ಬಂಧಿಸಿದ ರೈಲ್ವೇ ಪೊಲೀಸರು

Kadaba Times News
0

ಕಡಬ ಟೈಮ್ಸ್ (KADABA TIMES): ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್ ರೈಲು ಟ್ರಾಕ್ ಸಮೀಪ  ಅಣ್ಣನನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮನ ವಿರುದ್ದ ರೈಲ್ವೇ ಪೊಲೀಸರು ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಗಂಭೀರವಾಗಿ ಗಾಯಗೊಂಡಿದ್ದು, ಆತನ ಸಹೋದರ ನಿಂಗಪ್ಪ (21) ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.  ಕಡಬ ಪೊಲೀಸರ ವಶದಲ್ಲಿದ್ದ ಆರೋಪಿಯನ್ನು ಜೂ.8ರ ರಾತ್ರಿಯೇ ಮಂಗಳೂರು ವಿಭಾಗದ ರೈಲ್ವೇ  ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.


ಆರಂಭದಲ್ಲಿ ಘಟನಾ ಸ್ಥಳಕ್ಕೆ  ಕಡಬ ಠಾಣಾ ಎಸ್.. ಅಭಿನಂದನ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯನ್ನು  ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ರೈಲ್ವೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದರು.  ಈ ವೇಳೆ   ಅಣ್ಣನಿಗೆ ವಿಪರೀತ ಕುಡಿತದ ಚಟವಿತ್ತು. ಆತನ ಕಾಟದಿಂದಲೇ 14 ವರ್ಷಗಳ ಹಿಂದೆ ಆತನ ಹೆಂಡತಿ ಮನೆ ಬಿಟ್ಟು ಹೋಗಿದ್ದಳು. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಯತ್ನಿಸಿದ್ದ. ಇಂದು ನನ್ನ ಜೊತೆಯೂ ಗಲಾಟೆ ಮಾಡಿದ. ಎಲ್ಲ ಹಿಂಸೆಯಿಂದ ರೋಸಿಹೋಗಿ ಅವನನ್ನು ಕೊಲೆ ಮಾಡಲು ನಿರ್ಧರಿಸಿದ್ದೆ,” ಎಂದು ನಿಂಗಪ್ಪ ಪೊಲೀಸರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.


ಜೂ.9 ರಂದು ರೈಲ್ವೇ ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.  ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಉಪ ನಿರೀಕ್ಷರು ಕಡಬ ಟೈಮ್ಸ್ ಗೆ ಪ್ರತಿಕ್ರಿಯೆ ನೀಡಿ, ಕೌಟಂಬಿಕ ಕಲಹದಿಂದ ಈ ಘಟನೆ ನಡೆದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಯ ವಿರುದ್ದ ಕೊನೆಯತ್ನ ಕೇಸು ದಾಖಲಿಸಿ ಬಂಧಿಸಲಾಗಿದೆ . ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ   


ಘಟನೆ ಹಿನ್ನೆಲೆ:   ಪುತ್ತೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ಜೂ.8 ರ  ಭಾನುವಾರ  ಮಧ್ಯಾಹ್ನ ತಮ್ಮ ಊರಿಗೆ ರೈಲಿನಲ್ಲಿ ಹೊರಟಿದ್ದರು. ಅಣ್ಣನನ್ನು ಮುಗಿಸಲು ಮೊದಲೇ ಸಂಚು ರೂಪಿಸಿದ್ದ ನಿಂಗಪ್ಪ, ಬಜಕರೆ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ಅಣ್ಣನನ್ನು ಕೆಳಗಿಳಿಸಿದ್ದಾನೆ. ರೈಲು ಹೊರಟುಹೋದ ನಂತರ, ನಿಲ್ದಾಣದಿಂದ ಸ್ವಲ್ಪ ದೂರ ಕೋಡಿಂಬಾಳ ಗ್ರಾಮದ ಕೋರಿಯಾರ್ ಎಂಬಲ್ಲಿಗೆ ಕರೆದೊಯ್ದು, ಏಕಾಏಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. 


ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಹನುಮಪ್ಪ, ಪಕ್ಕದಲ್ಲೇ ಇದ್ದ ಚರಂಡಿಗೆ ಹಾರಿ ನೀರಿನಲ್ಲಿ ಹೊರಳಾಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದ ಆತನ ಚೀರಾಟ ಕೇಳಿ ಸ್ಥಳೀಯರು ಧಾವಿಸಿ ಬಂದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮೊದಲು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ್ಗೆ ದಾಖಲಿಸಿ  ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top