ಕುಕ್ಕೆ ಸುಬ್ರಹ್ಮಣ್ಯ | ಯಾತ್ರಾರ್ಥಿಯ ಕೆನ್ನೆಗೆ ಬಾರಿಸಿದ ಆರೋಪಿಯನ್ನು ತುಮಕೂರಿನಲ್ಲಿ ಬಂಧಿಸಿದ ಸುಬ್ರಹ್ಮಣ್ಯ ಪೊಲೀಸರು

ಕುಕ್ಕೆ ಸುಬ್ರಹ್ಮಣ್ಯ | ಯಾತ್ರಾರ್ಥಿಯ ಕೆನ್ನೆಗೆ ಬಾರಿಸಿದ ಆರೋಪಿಯನ್ನು ತುಮಕೂರಿನಲ್ಲಿ ಬಂಧಿಸಿದ ಸುಬ್ರಹ್ಮಣ್ಯ ಪೊಲೀಸರು

Kadaba Times News
0

 ಕಡಬ ಟೈಮ್ಸ್ (KADABA TIMES): ಸುಬ್ರಹ್ಮಣ್ಯ: ಇಲ್ಲಿನ ಕಾಶಿಕಟ್ಟೆ ಮಾರ್ಗದಲ್ಲಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್‌ ಎಂಬಾತನನ್ನು ತುಮಕೂರಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಬಂಧಿಸಿ, ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.



ಕೊಠಡಿ ವಿಚಾರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದ್ದು, ಹಲ್ಲೆಯ ವೀಡಿಯೋ ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಆರೋಪಿಗೆ ಜಾಮೀನು ಲಭಿಸಿದೆ.


ಯುವಕನಿಗೆ ಹಲ್ಲೆ ಮಾಡಿದ ಆರೋಪಿಯ ವಿರುದ್ದ ದಿನಾಂಕ ಜೂ.10  ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ:31/2025.ಕಲಂ:126(2),115(2),352 BNS ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ ಈ ದೌರ್ಜನ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು .ಅಲ್ಲದೆ  ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top